ಕೋರ್ಟ್ ಆದೇಶಕ್ಕೂ ಜಗ್ಗದ ಕೆಪಿಎಸ್‌ಸಿ: ಹೆಚ್ಚುವರಿ ಪಟ್ಟಿಗಾಗಿ ಸಿಎಸ್ ಮೊರೆ

KPSC
Published on

ಬೆಂಗಳೂರು: ನ್ಯಾಯಾಲಯದ ಆದೇಶದ ಹೊರತಾಗಿಯೂ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕ ಹುದ್ದೆಗಳ ಹೆಚ್ಚುವರಿ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕೆಪಿಎಸ್‌ಸಿ ಬಿಡುಗಡೆ ಮಾಡುತ್ತಿಲ್ಲ. ಆದ್ದರಿಂದ ಕೂಡಲೇ ಬಿಡುಗಡೆಗೆ ಸೂಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಹುದ್ದೆ ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ.

ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಹೆಚ್ಚುರಿ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಆರು ವಾರಗಳ ಒಳಗೆ ಬಿಡುಗಡೆ ಮಾಡುವಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿಯು (ಕೆಎಟಿ) ೆ.13ರಂದು ಸೂಚಿಸಿತ್ತು. ಆದರೆ, ಈವರೆಗೂ ಕೆಪಿಎಸ್‌ಸಿ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.

ಕೆಪಿಎಸ್‌ಸಿಯು ಅಭ್ಯರ್ಥಿಗಳಿಗೆ ಅನ್ಯಾಯ ಮಾಡುವ ಜತೆಗೆ ಕೆಎಟಿ ಆದೇಶವನ್ನು ಉಲ್ಲಂಘನೆ ಮಾಡುತ್ತಿದೆ. ಆದ್ದರಿಂದ ಸಾರಿಗೆ ಇಲಾಖೆಯ ಆಯುಕ್ತರಿಗೆ ಅಥವಾ ಕೆಪಿಎಸ್‌ಸಿ ಕಾರ್ಯದರ್ಶಿಗೆ ಕೂಡಲೇ ಸೂಚಿಸಿ ಹೆಚ್ಚುವರಿ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿಸುವಂತೆ ಒತ್ತಾಯಿಸಿದ್ದಾರೆ.

ಕೆಪಿಎಸ್‌ಸಿ 2016ರ ೆ.4ರಂದು ಅಧಿಸೂಚನೆ ಹೊರಡಿಸಿ ಪರೀಕ್ಷೆ ನಡೆಸಲಾಗಿತ್ತು. ಪ್ರಕರಣವು ನ್ಯಾಯಾಲಯದಲ್ಲಿದ್ದರಿಂದ ಅಂತಿಮವಾಗಿ 2023ರ ನ.3ರಂದು ಪರಿಷ್ಕೃತ ಆಯ್ಕೆಪಟ್ಟಿಯನ್ನು ಪ್ರಕಟಿಸಿತ್ತು. ಆದರೆ, ಈ ವರೆಗೂ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net