

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಹತೆ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆರ್ಪಿಸಿ- 244 ಹಾಗೂ ಹೈದ್ರಾಬಾದ್ - ಕರ್ನಾಟಕ 279 ಸೇರಿ ಒಟ್ಟು 523 ಹುದ್ದೆಗಳಿವೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ಇತರ ಮಾನದಂಡಗಳನ್ನು ಅನುಸರಿಸಲಾಗುತ್ತದೆ.
ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು, ಶಿವಮೊಗ್ಗ ವಿಭಾಗೀಯ ಕೇಂದ್ರಗಳಲ್ಲಿ ಅಥವಾ ಆಯೋಗ ನಿಗದಿಪಡಿಸುವ ಇತರ ಯಾವುದೇ ಕೇಂದ್ರ ಸ್ಥಳದಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುವುದು.
ಆಗಸ್ಟ್ 20 ರಿಂದ ಸೆಪ್ಟೆಂಬರ್ 19ರ ವರೆಗೆ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ http://www.kpsc.kar.nic.in ನೋಡಬಹುದು.