ಗೆಜೆಟೆಡ್​ ಗ್ರೂಪ್​ ಎ ಮತ್ತು ಬಿ ವೃಂದದ ಪರೀಕ್ಷೆ ಮುಂದೂಡಿದ KPSC

dk - 2025-03-21T195301.311
Published on

KPSC: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 2023-24ನೇ ಸಾಲಿನ ಗೆಜೆಟೆಡ್​ ಗ್ರೂಪ್​ ಎ ಮತ್ತು ಬಿ ವೃಂದದ 384 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ.

ಇದೇ ಮಾರ್ಚ್​ 28, 29 ಮತ್ತು ಏ.1, 2ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸರ್ಕಾರ, ಮಾರ್ಚ್​ 28, 29 ಮತ್ತು ಏ.1, 2ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಶೀಘ್ರದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ವೆಬ್​ಸೈಟ್​ನಲ್ಲಿ ಮುಂದಿನ ದಿನಾಂಕದ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿಲಾಗುವುದು ಎಂದು ಉಲ್ಲೇಖಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net