

ಬೆಂಗಳೂರು: ( Krishna Janmashtami ) ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆ.16ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 16 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಇರುವ ಪ್ರಯುಕ್ತ, ಶನಿವಾರ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ . ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ಹೇಳಿದ್ದಾರೆ.
ನಗರದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.