ಗಮನ ಸೆಳೆದ ಕೃಷ್ಣ-ರಾಧೆ ವೇಷಭೂಷಣ ಸ್ಪರ್ಧೆ

Srikrishna Janmashtami Costume Competition
ಶಿವಮೊಗ್ಗ ವೆಂಕಟೇಶನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ನಿಮಿತ್ತ ಕೃಷ್ಣ-ರಾಧೆ ವೇಷಭೂಷಣ ಮತ್ತು ಚಿತ್ರಕಲಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ರಾಜೇಶ್ವರಿ ಸಿಂಗ್, ತಾಜುದ್ದೀನ್ ಖಾನ್, ಆರ್.ಮಂಜುಳಾ, ಡಿ.ಬಿ.ಸತೀಶ್, ನಾಗಪ್ಪ ಇದ್ದರು.
Published on

ಶಿವಮೊಗ್ಗ: ವೆಂಕಟೇಶ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶ್ರೀಕೃಷ್ಣ ಜನ್ಮಾಷ್ಠಮಿ ನಿಮಿತ್ತ ಏರ್ಪಡಿಸಿದ್ದ ಕೃಷ್ಣ-ರಾಧೆ ವೇಷಭೂಷಣ ಸ್ಪರ್ಧೆ ಗಮನ ಸೆಳೆಯಿತು. ಇದೇ ವೇಳೆ 20ಕ್ಕೂ ಅಧಿಕ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಶಿವಮೊಗ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಂಗಳೂರಿನ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ, ಶಿವಮೊಗ್ಗ ಮಹಿಳಾ ಸಬಲೀಕರಣ ಸಬಲೀಕರಣ ಘಟಕ ಹಾಗೂ ಇನ್ನರ್ ವೀಲ್ ಕ್ಲಬ್ ಸಹಯೋಗದಲ್ಲಿ ನಡೆದ ವೇಷಭೂಷಣ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ರಾಜೇಶ್ವರಿ ಸಿಂಗ್ ಉದ್ಘಾಟಿಸಿದರು.
ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ತಾಜುದ್ದೀನ್ ಖಾನ್, ಜಿಲ್ಲಾ ಬಾಲಭವನ ಸಮಿತಿ ಕಾರ್ಯಕ್ರಮ ಸಂಯೋಜಕಿ ಆರ್.ಮಂಜುಳಾ, ಶಾಲೆಯ ಮುಖ್ಯ ಶಿಕ್ಷಕ ಡಿ.ಬಿ.ಸತೀಶ್, ತೀರ್ಪುಗಾರರಾದ ನಾಗಪ್ಪ, ಯತ್ನನಾಳ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net