ಕೆಆರ್​ಎಸ್​ ಡ್ಯಾಂ ಬಳಿ ಮತ್ತೆ ಕಾಣಿಸಿಕೊಂಡ ಚಿರತೆ: ಪ್ರವಾಸಿಗರು, ಸಿಬ್ಬಂದಿಯಲ್ಲಿ ಹೆಚ್ಚಿದ ಆತಂಕ

krs dam cheetha
Published on

ಕೆ.ಆರ್​.ಸಾಗರ: ಕೃಷ್ಣರಾಜಸಾಗರದ ಅಣೆಕಟ್ಟೆ ಬಳಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಪ್ರವಾಸಿಗರು ಮತ್ತು ಸಿಬ್ಬಂದಿಯಲ್ಲಿ ಆತಂಕ ಮೂಡಿದೆ.

ನಿನ್ನೆ(ಅ.28) ಉತ್ತರ ಬೃಂದಾವನದ ಬಳಿ ಚಿರತೆ ಓಡಾಡಿದ್ದು, ಸಿಸಿ ಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಒಂದೇ ವಾರದಲ್ಲಿ ಮೂರು ಬಾರಿ ಚಿರತೆ ಕಾಣಿಸಿಕೊಂಡಿದೆ.

ಅ.22ರ ಬೆಳಗ್ಗೆ ಕಾವೇರಿ ನೀರಾವರಿ ನಿಗಮದ ಕೆಲಸಗಾರರು ಅಣೆಕಟ್ಟೆ ಬಳಿ ಗಿಡ-ಗಂಟಿ ತೆರವು ಮಾಡುತ್ತಿದ್ದಾಗ ದಕ್ಷಿಣ ದ್ವಾರದ ಬಳಿಯ ನಗುವನ ತೋಟದಿಂದ ಅಣೆಕಟ್ಟೆ ಮೇಲೆ ಚಿರತೆ ಹೋಗುತ್ತಿರುವುದನ್ನ ಕಂಡು ಮೇಲಧಿಕಾರಿಗಳಿಗೆ ತಿಳಿಸಿದ್ದರು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿತ್ತು. ಅಂದು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಇದಾದ ಮರುದಿನ ಕೂಡ ಚಿರತೆ ಕಾಣಿಸಿಕೊಂಡಿತ್ತು.

ಚಿರತೆ ಸೆರೆಗೆ ಅರಣ್ಯ ಇಲಾಖೆಯು ಬೋನ್ ಇರಿಸಿ, ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆ ವೇಳೆ ಕಾಣಿಸಿಕೊಳ್ಳದ ಚಿರತೆ, ನಿನ್ನೆ(ಅ.28) ಸಂಜೆ ಕಾಣಿಸಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net