

ಹಾವೇರಿ: ಬ್ರಿಟಿಷರೇ, ಭಾರತ ಬಿಟ್ಟು ತೊಲಗಿ ಹೋರಾಟದ ಸ್ಮರಣಾರ್ಥ ಆ. ೮ ಮತ್ತು ೯ರಂದು ಕೆಆರ್‌ಎಸ್ ಪಕ್ಷದಿಂದ ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆ. ೮ರಂದು ಬೆಳಗ್ಗೆ ೧೦ಗಂಟೆಗೆ ನಗರದ ಮೈಲಾರ ಮಹದೇವಪ್ಪ ಸ್ಮಾರಕದಿಂದ ಜಾಥಾಕ್ಕೆ ಚಾಲನೆ ನೀಡಲಾಗುವುದು ಎಂದು ಕೆಆರ್‌ಎಸ್ ಪಕ್ಷ ರಾಜ್ಯಾಧ್ಯಕ್ಷ ರವಿ ಕೃಷ್ಣರೆಡ್ಡಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ. ೮ ಮತ್ತು ೯ ರಂದು ಶಿಗ್ಗಾಂವಿ-ಸವಣೂರ ವಿಧಾನಸಭಾ ಕ್ಷೇತ್ರಾದ್ಯಂತ ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಮತ್ತು ಯುವಜನರೇ, ರಾಜಕೀಯಕ್ಕೆ ಬನ್ನಿ ಎಂದು ಆಹ್ವಾನಿಸುವ ಜಾಥಾ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೧೦ ಗಂಟೆಗೆ ಹಾವೇರಿಯಲ್ಲಿರುವ ಮೈಲಾರ ಮಹದೇವಪ್ಪ ಸ್ಮಾರಕದ ಬಳಿ ಮಾಜಿ ಶಾಸಕ ಮಹಿಮಾ ಪಟೇಲ್ ಸೇರಿ ಹಲವು ಗಣ್ಯರು ಜಾಥಾಗೆ ಚಾಲನೆ ನೀಡಲಿದ್ದಾರೆ ಎಂದರು.
ನAತರ ಈ ಜಾಥಾವು ಶಿಗ್ಗಾಂವಿ-ಸವಣೂರ ವಿಧಾನಸಭೆ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಸುಮಾರು ೬೦ ಹಳ್ಳಿ-ಪಟ್ಟಣಗಳಲ್ಲಿ ೨೦೦ ಕಿ.ಮೀ.ಗೂ ಹೆಚ್ಚು ಸಂಚರಿಸಲಿದ್ದು ಜನರಿಗೆ ಸ್ವಾತಂತ್ರ÷್ಯ ಹೋರಾಟದ ತ್ಯಾಗ ಮತ್ತು ಬಲಿದಾನಗಳನ್ನು ನೆನಪಿಸುವ ಜತೆಗೆ, ಇಂದಿನ ಭ್ರಷ್ಟ ಮತ್ತು ಜನವಿರೋಽ ರಾಜಕಾರಣವು ನಮ್ಮ ಪೂರ್ವಿಕರ ತ್ಯಾಗ, ಬಲಿದಾನಗಳನ್ನು ಹೇಗೆ ವ್ಯರ್ಥ ಮಾಡುತ್ತಿದೆ ಮತ್ತು ಅವಮಾನಿಸುತ್ತಿದೆ ಎನ್ನುವುದನ್ನು ಜನರಿಗೆ ಮನವರಿಕೆ ಮಾಡಲಿದೆ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಧಾರ್ಮರಾಜು ಬಿಂದಲಗಿ, ಚರಣರಾಜ್ ರೊಡ್ಡನವರ, ಗಂಗಾ ಕೋರಿ, ಶ್ರೀನಿವಾಸ ಬೇಂದ್ರೆ, ವೆಂಕಟೇಶ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.
೧೦ರಂದು ಜನಸಮಾವೇಶ...
ಆ. ೧೦ರಂದು ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ಜಾಥಾದ ಸಮಾರೋಪ ಮತ್ತು ಕೆಆರ್‌ಎಸ್ ಪಕ್ಷದ ೫ನೇ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಜನ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ರಾಜ್ಯದ ವಿವಿಧೆಡೆಗಳಿಂದ ಕೆಆರ್‌ಎಸ್ ಪಕ್ಷದ ಸದಸ್ಯರು ಮತ್ತು ಬೆಂಬಲಿಗರು ಆಗಮಿಸುವರು ಎಂದು ತಿಳಿಸಿದರು.