

ಕೆ.ಆರ್.ಸಾಗರ : ಹೊಸ ಸಾಯಪನಹಳ್ಳಿ ಬಳಿಯಿರುವ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಶನಿವಾರ ಭಕ್ತರು ಪೂಜೆ ಸಲ್ಲಿಸಿದರು.
ಸುಬ್ರಮಣ್ಯ ದೇವರ ಪ್ರತಿಮೆಗೆ ಅರ್ಚಕ ಶಶಿಕುಮಾರ್ ನೇತೃತ್ವದಲ್ಲಿ ವಿಶೇಷವಾಗಿ ಪಂಚಾಮೃತ ಅಭಿಷೇಕ ಹಾಗೂ ಎಣ್ಣೆ ಮಜ್ಜನ ಸಲ್ಲಿಸಲಾಯಿತು. ನಂತರ ವಿವಿಧ ಹೂಗಳಿಂದ ದೇವರನ್ನು ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಸುತ್ತಮುಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಸುಬ್ರಮಣ್ಯ ದೇವರಿಗೆ ಹೂ-ಹಣ್ಣು ಸಮೇತ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ವಿವಿಧ ಬಣ್ಣದ ದೀಪಗಳಿಂದ ದೇವಾಲಯವನ್ನು ಅಲಂಕಾರ ಮಾಡಲಾಗಿತ್ತು. ಷಷ್ಠಿ ಪ್ರಯುಕ್ತ ದೇವಸ್ಥಾನದ ಆವರಣದಲ್ಲಿ ವಿಶೇಷ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯಿತು.