ಸಮುದಾಯದ ಅಭಿವೃದ್ಧಿಗೆ ಚಿಂತನೆ ನಡೆಸಿ

17KDR1vishwakarma
ಕಡೂರು ತಾಪಂನಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಶಾಸಕ ಕೆ.ಎಸ್.ಆನಂದ್ ಹಾಗೂ ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಉದ್ಘಾಟಿಸಿದರು. ಸಿ.ಎಸ್.ಪೂರ್ಣಿಮಾ, ಸಿ.ಆರ್.ಪ್ರವೀಣ್, ಗೋಪಾಲಾಚಾರ್, ಓಂಕಾರಮೂರ್ತಿ, ಆರ್.ಟಿ. ಮಂಜುನಾಥಾಚಾರ್, ತೀರ್ಥಾಚಾರ್ ಇತರರಿದ್ದರು.
Published on

ಕಡೂರು: ಪಂಚಕುಲಕಸುಬನ್ನು ಉಳಿಸಿಕೊಂಡೇ ಶಿಕ್ಷಣ ಮತ್ತು ಸಂಘಟನೆ ಮೂಲಕ ಸಮುದಾಯದ ಅಭಿವೃದ್ಧಿಗೆ ಚಿಂತನೆ ನಡೆಸಬೇಕಾದ ಅಗತ್ಯ ವಿಶ್ವಕರ್ಮ ಸಮಾಜಕ್ಕಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ತಾಪಂನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ವಿಶ್ವಕರ್ಮ ಜನಾಂಗದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಬಹಳಷ್ಟು ಕೊಡುಗೆ ನೀಡಿವೆ. ವಿಶ್ವಕರ್ಮ ಅಭಿವೃದ್ಧಿ ನಿಗಮವನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ ಎಂದರು.
ತಾಲೂಕಿನಲ್ಲಿ ಸಮಾಜದ ಆಸ್ತಿಯಾಗಿರುವ 25 ಎಕರೆ ಜಮೀನನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡಿಲ್ಲ. ವೈಯಕ್ತಿಕ ಹಿತಾಸಕ್ತಿ ಬದಿಗಿಟ್ಟು ಆ ಜಾಗದ ಉಪಯೋಗ ಪಡೆಯಲು ವಿಶ್ವಕರ್ಮ ಸಮಾಜ ಮುಂದಾಗಬೇಕಿದೆ. ಸಮಾಜದ ಸಮಸ್ಯೆಗಳಿಗೆ ಸದಾ ಕಾಲ ಧ್ವನಿಯಾಗಿ ಸಹಕಾರ ನೀಡುತ್ತೇನೆ. ಕಾಳಿಕಾಂಬಾ ದೇವಸ್ಥಾನದ ಸಮುದಾಯ ಭವನ ಹಾಗೂ ಮತ್ತಿತರ ಕಾರ್ಯಗಳಿಗೆ ನನ್ನ ಸಹಕಾರ ನಿರಂತರವಾಗಿರಲಿದೆ ಎಂದರು.
ಜಿಲ್ಲಾ ವಿಶ್ವಕರ್ಮ ಮಹಾಸಭಾದ ಯುವ ಘಟಕದ ಅಧ್ಯಕ್ಷ ಎಸ್.ಡಿ.ಗೋಪಾಲಾಚಾರ್ ಮಾತನಾಡಿ, ಪುರಸಭೆಯಲ್ಲಿ ಸಮಾಜದ ಒಬ್ಬರಿಗೆ ನಾಮಿನಿಗೆ ಅವಕಾಶ ಕಲ್ಪಿಸಿಕೊಡಬೇಕಿದೆ ಎಂದು ಮನವಿ ಮಾಡಿದರು.
ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ತೀರ್ಥಾಚಾರ್, ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ಕೆಡಿಪಿ ನಾಮಿನಿ ಸದಸ್ಯ ಗುಮ್ಮನಹಳ್ಳಿ ಅಶೋಕ್, ಸಮಾಜದ ಮುಖಂಡರಾದ ಕೃಷ್ಣಮೂರ್ತಿ ಆಚಾರ್, ಆರ್.ಟಿ.ಮಂಜುನಾಥ್ ಆಚಾರ್, ಕೃಷ್ಣಪ್ಪ ಆಚಾರ್, ಓಂಕಾರ್‌ಮೂರ್ತಿ, ಶ್ರೀನಿಧಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net