ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ

KS Eshwarappa
Published on

ಬೆಂಗಳೂರು: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪನವರು ಚುನಾವಣಾ ರಾಜಕೀಯಕ್ಕೆ ನಿವೃತ್ತ ಘೋಷಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, “ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೇನೆ” ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?: ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸುತ್ತಿದ್ದೇನೆ. ಹೀಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತಿದ್ದೇನೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್​​ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net