

ರಾಮನಗರ: ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರು ಅಪಘಾತಕ್ಕೀಡಾಗಿದೆ.
ಶುಕ್ರವಾರ ಸಂಜೆ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ತೆರಳುವಾಗ ನೈಸ್ ರಸ್ತೆಯ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಸಚಿವರ ಕಾರಿನ ನಡುವೆ ಅಪಘಾತವಾಗಿದೆ.
ಮೈಸೂರಿನಿಂದ ಬೆಂಗಳೂರಿನ ಕಡೆಗೆ ಕೋಟ ಶ್ರೀನಿವಾಸ್ ಪೂಜಾರಿ ಪ್ರಯಾಣ ಬೆಳೆಸಿದ್ದರು. ಅಪಘಾತದಲ್ಲಿ ಸಚಿವರು ಮತ್ತು ಸಚಿವರ ಕಾರಿನ ಚಾಲಕ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.