ದಯಮಾಡಿ ಹಠ ಬಿಟ್ಟು ಮುಷ್ಕರ ಹಿಂಪಡೆಯಿರಿ: ಸಾರಿಗೆ ನೌಕರರಿಗೆ ಸಿಎಂ ಯಡಿಯೂರಪ್ಪ ಮನವಿ

BSY
Published on

ಹುಬ್ಬಳ್ಳಿ: ಹಠ ಮಾಡದೆ ಮುಷ್ಕರ ಹಿಂಪಡೆಯಿರಿ. ನಾವೆಲ್ಲ ಒಟ್ಟಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಕೆಲಸ ಮಾಡಬೇಕು. ಬಿಗುವಿನ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಿಮ್ಮ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನ ಈಡೇರಿಸಿದ್ದೇನೆ. ದಯಮಾಡಿ ಮುಷ್ಕರ ಕೈಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು ಎಂದರು.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ ಆಗಿದೆ. ಖಾಸಗಿ ಬಸ್, ರೈಲ್ವೆ ಸೇರಿದಂತೆ ಹಲವು ವ್ಯವಸ್ಥೆ ಮಾಡಿದ್ದೇವೆ ಎಂದು ಸಿಎಂ ಹೇಳಿದರು.

ನಾಳೆಯಿಂದ ಸಾರಿಗೆ ನೌಕರರು ಮುಷ್ಕರಕ್ಕೆ ಕರೆನೀಡಿದ್ದು, ಇಂದು ಮಧ್ಯಾಹ್ನದಿಂದಲೇ ಬಸ್​ಗಳು ರಸ್ತೆಗೆ ಇಳಿಯದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net