ಜು.6ರಿಂದ ಗೋವಾಗೆ ಬಸ್ ಸಂಚಾರ ಆರಂಭ; ಕೋವಿಡ್ ನೆಗಟಿವ್ ವರದಿ ಇರುವವರಿಗೆ ಮಾತ್ರ ಅವಕಾಶ

goa
Published on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಗೋವಾ ರಾಜ್ಯಕ್ಕೆ ಸಾರಿಗೆ ಕಾರ್ಯಾಚರಣೆಯನ್ನು ಜು.6ರಿಂದ ಪುನರಾರಂಭಗೊಳಿಸಲಿದ್ದು, ಪ್ರಯಾಣಿಸುವವರು ಕೋವಿಡ್ ನೆಗಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕೆಂದು ಸೂಚನೆ ನೀಡಿದೆ.

ನಿಗಮದ ಬಸ್ಸುಗಳಲ್ಲಿ ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಪ್ರಯಾಣಿಸುವವರು, 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಪ್ರಯಾಣಿಕರು ವರದಿಯನ್ನು ಹೊಂದಿರುವ ಬಗ್ಗೆ ಆಯಾ ಬಸ್‌ನ ನಿರ್ವಾಹಕರು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕು. ಈ ಕುರಿತು ಚಲನಾ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು.

ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಸಾರಿಗೆಗಳನ್ನು ಕಾರ್ಯಚರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮದ ಬಗ್ಗೆ ಹಾಗೂ ಪುನರಾಂಭಿಸಿದ ಸಾರಿಗೆಗಳ ವಿವರಗಳನ್ನು ಕಚೇರಿಗೆ ತ್ವರಿತವಾಗಿ ಕಳುಹಿಸಿಕೊಡಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮುಖ್ಯ ಸಂಚಾರ ವ್ಯವಸ್ಥಾಪಕರು ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net