ರಾಜ್ಯದಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರ ಶೀಘ್ರವೇ ಆರಂಭ?

Lakshman Savadi 17 May 20
Published on

ಬೆಂಗಳೂರು: ಕೇಂದ್ರ ಸರ್ಕಾರ ಲಾಕ್​ಡೌನ್​ ನಾಲ್ಕನೇ ಹಂತದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ನಾಳೆ (ಮೇ 17) ಬೆಳಗ್ಗೆ 11ಗಂಟೆಗೆ ಸಚಿವರ ಸಭೆ ಕರೆದಿದ್ದಾರೆ. ನಾಳೆ ಸಾರಿಗೆ ಮತ್ತು ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ.

ಕೇಂದ್ರ ಸರ್ಕಾರ ಬಸ್​, ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಸಂಚರಿಸಲು ಅವಕಾಶ ಕೊಡಬೇಕೋ ಬೇಡವೋ ಎಂಬುದನ್ನು ನಿರ್ಧರಿಸುವ ಹೊಣೆಯನ್ನು ರಾಜ್ಯ ಸರ್ಕಾರಗಳಿಗೇ ಬಿಟ್ಟಿದೆ. ಈ ಬಗ್ಗೆ ನಾಳಿನ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ.

ಇನ್ನು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ್​ ಸವದಿಯವರೂ ಕೂಡ ರಾಜ್ಯದಲ್ಲಿ ಸಾರಿಗೆ ಬಸ್​ಗಳ ಸಂಚಾರ ಮರು ಆರಂಭದ ಬಗ್ಗೆ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net