ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ಬಿಡಿ

skp bus
ಹೆಚ್ಚಿನ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶಕ್ತಿ ಸಂಗ್ರಾಮ ವೇದಿಕೆಯ ಸದಸ್ಯರು ಕೆಎಸ್‌ಆರ್‌ಟಿಸಿ ಶಿಕಾರಿಪುರ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ರವಿ ನಾಯ್ಕ, ಶಿವಯ್ಯ ಶಾಸ್ತ್ರಿ, ಆನಂದ ಇತರರಿದ್ದರು.
Published on

ಶಿಕಾರಿಪುರ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇನ್ನೂ ಹೆಚ್ಚಿನ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳವಾರ ಶಕ್ತಿ ಸಂಗ್ರಾಮ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿ ಶಿಕಾರಿಪುರ ಘಟಕ ವ್ಯವಸ್ಥಾಪಕರಿಗೆ ಸೋಮವಾರ ಮನವಿ ಸಲ್ಲಿಸಿದರು.
ಪ್ರತಿದಿನ ಕೋಡಿಕೊಪ್ಪ, ಹಿರೇಜಂಬೂರು, ಕುಸ್ಕೂರು, ಚನ್ನಳ್ಳಿಯಿಂದ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಶಿಕಾರಿಪುರಕ್ಕೆ ಆಗಮಿಸುತ್ತಿದ್ದು, ಸರಿಯಾಗಿ ಬಸ್‌ಗಳ ವ್ಯವಸ್ಥೆ ಇಲ್ಲದೆ ಶೈಕ್ಷಣಿಕ ಚಟುವಟಿಕೆಗೆ ತೊಂದರೆಯಾಗಿದೆ ಎಂದು ಜಿಲ್ಲಾ ಕಾರ್ಯಾಧ್ಯಕ್ಷ ಶಿವಯ್ಯಶಾಸ್ತ್ರಿ ದೂರಿದರು.
ಶಿಕಾರಿಪುರಕ್ಕೆ ಹೊಸ ಡಿಪೋ ಆದ ಮೇಲೆ ಈ ಸಮಸ್ಯೆ ಬಗೆಹರಿಯಬಹುದೆಂಬ ನಿರೀಕ್ಷೆ ಸುಳ್ಳಾಗಿದೆ. ದಾವಣಗೆರೆ ಡಿಪೋ ಬಸ್ ಓಡಾಡುತ್ತಿದೆ. ಶಿರಾಳಕೊಪ್ಪ ಸೇರಿ ತಾಲೂಕಿನ ಸುತ್ತಮುತ್ತಲಿನ ಭಾಗಗಳಿಂದ ವಿದ್ಯಾರ್ಥಿಗಳು ಶಿಕಾರಿಪುರಕ್ಕೆ ಆಗಮಿಸುತ್ತಾರೆ. ಅವರಿಗೂ ಸರಿಯಾದ ಸಮಯಕ್ಕೆ ಸರ್ಕಾರಿ ಬಸ್‌ಗಳಿಲ್ಲದೆ ಖಾಸಗಿ ಬಸ್‌ಗಳನ್ನು ಅವಲಂಬಿಸಬೇಕಾಗಿದೆ ಎಂದರು.
ವಿದ್ಯಾರ್ಥಿಗಳು ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಉಸ್ತುವಾರಿ ಸಚಿವರು ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಉಪಾಧ್ಯಕ್ಷ ರವಿ ಡಿ. ನಾಯ್ಕ, ತಾಲೂಕು ಅಧ್ಯಕ್ಷ ಆನಂದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net