ವಿಧಾನಸೌಧ ಮುಂಭಾಗ ಪಲ್ಲಕ್ಕಿಗೆ ಚಾಲನೆ

ksrtc
Published on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಸ್ಲೀಪರ್ ‘ಪಲ್ಲಕ್ಕಿ’ ಹೆಸರಿನ ಬಸ್ಸುಗಳು ಹಾಗೂ ಪಾಯಿಂಟ್ ಟು ಪಾಯಿಂಟ್ ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್ಸುಗಳಿಗೆ ಚಾಲನೆ ದೊರೆಯುತ್ತಿದೆ.

ವಿಧಾನಸೌಧ ಮುಂಭಾಗ ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇಲಾಖೆ ಅಧಿಕಾರಿಗಳು ಹಾಜರಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net