ಜನಿವಾರ ಕತ್ತರಿಸಿದ್ದಕ್ಕೆ ಕೂಡಲಿ ಶ್ರೀ ಖಂಡನೆ

koodali matt vidhyabhinava vidhyaranya bharati sree
ಕೂಡಲಿ ಶ್ರೀ ಶಾರದಾ ಪೀಠಮ್ನ ಪೀಠಾಧಿಪತಿ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮೀಜಿ
Published on

ಶಿವಮೊಗ್ಗ: ರಾಜ್ಯದ ವಿವಿಧ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವುದನ್ನು ಕೂಡಲಿ ಶ್ರೀ ಶಾರದಾ ಪೀಠಮ್ನ ಪೀಠಾಧಿಪತಿ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಖಂಡಿಸಿದ್ದು, ಈ ಘಟನೆಗಳು ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತ ಹಲವು ಭಿನ್ನ ಭಿನ್ನ ಸಂಸ್ಕೃತಿಗಳನ್ನು ಭಾವೈಕ್ಯದಿಂದ ಒಗ್ಗೂಡಿಸಿಕೊಂಡು ಬಂದಿರುವ ರಾಷ್ಟ್ರ. ಆದರೆ, ಇತ್ತೀಚಿನ ದಿನಗಳಲ್ಲಿ ರಾಜಕೀಯ ಲಾಭಕ್ಕಾಗಿ ಜಾತಿ ಮತ್ತು ಕೋಮು ಪ್ರಚೋದನೆ ಮಾಡುತ್ತಾ ವಿದ್ಯಾರ್ಥಿಗಳ ಬದುಕನ್ನು ಹಾಳು ಮಾಡುವ ಕೃತ್ಯಗಳು ನಡೆಯುತ್ತಿವೆ. ಇಲ್ಲಿ ಎಲ್ಲ ಜಾತಿಗೂ ಅದರದೇ ಆದ ವೈಶಿಷ್ಟ್ಯ-ಸಂಸ್ಕೃತಿ, ಸಂಸ್ಕಾರ ಇರುತ್ತದೆ. ಜನಿವಾರ-ಶಿವದಾರಗಳು ಕೇವಲ ಜಾತಿಯ ಸಂಕೇತಗಳಲ್ಲ. ಅವರ ಇಡೀ ಬದುಕು. ಜಾತ್ಯತೀತತೆಯ ಹೆಸರಿನಲ್ಲಿ ಯಾವುದೇ ಜಾತಿ-ಧರ್ಮದ ಅವಹೇಳನ, ತಿರಸ್ಕಾರ ಸರಿಯಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆದಿರುವ ಈ ಪ್ರಕರಣ ಕೇವಲ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ನೋವುಂಟು ಮಾಡಿಲ್ಲ. ಇಡೀ ಹಿಂದು ಸಮಾಜಕ್ಕೆ ನೋವುಂಟು ಮಾಡಿದೆ. ಈ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳದೇ ಇಂತಹ ಕೃತ್ಯಗಳು ಮುಂದೆ ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net