ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗುರುಸಿದ್ದನಗೌಡ ರಾಜೀನಾಮೆ

M Gurusiddanagouda Kudligi
ಎಂ.ಗುರುಸಿದ್ದನ ಗೌಡ.
Published on

ಕೂಡ್ಲಿಗಿ: ತಾವು ಸೂಚಿಸಿದ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಗುರುಸಿದ್ದನಗೌಡ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಪತ್ರ ಬರೆದಿರುವ ಅವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷದ ಅಭ್ಯರ್ಥಿ ಪರ ನಿಷ್ಠೆಯಿಂದ ಕೆಲಸ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗುರುಸಿದ್ದನಗೌಡ, ಕಳೆದ 20 ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ, ನಾಲ್ಕು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆ ಜತೆಗೆ ಕೂಡ್ಲಿಗಿ ಕ್ಷೇತ್ರದಲ್ಲಿ ಎಲ್ಲ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿ ಪರ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ.

ಹೀಗಾಗಿ ಈ ಬಾರಿ ಕೂಡ್ಲಿಗಿ ಕ್ಷೇತ್ರಕ್ಕೆ ನಾವು ಸೂಚಿಸಿದ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೋರಿದ್ದೇವು.

ಆದರೆ ಪಕ್ಷ ನಮ್ಮ ಮನವಿಗೆ ಸ್ಪಂದಿಸದೆ ಇತ್ತೀಚೆಗೆ ಪಕ್ಷ ಸೇರಿದವರಿಗೆ ಟಿಕೆಟ್ ನೀಡಿದೆ. ಇದರಿಂದ ನಾನು ಬೇಸತ್ತು ರಾಜೀನಾಮೆ ನೀಡಿದ್ದೇನೆ. ಶೀಘ್ರವೇ ನನ್ನ ಮುಂದಿನ ನಡೆ ತೀರ್ಮಾನಿಸುವುದಾಗಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net