

ಕೂಡ್ಲಿಗಿ: ತಾಲೂಕಿನ ಚಂದ್ರಶೇಖರಪುರ ಗ್ರಾಮದ ಕಸ್ತೂರಬಾ ವಸತಿ ನಿಲಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್‌ಗೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಭೇಟಿ ನೀಡಿ, ಪರಿಶೀಲಿಸಿದರು.
ಅಧಿಕಾರಿಗಳೊಂದಿಗೆ ನೇರವಾಗಿ ಅಡುಗೆ ಕೋಣೆಗೆ ತೆರಳಿ, ಆಹಾರ ತಯಾರಿಕೆ, ಅಡುಗೆ ಪದಾರ್ಥ, ಸ್ವಚ್ಛತೆ, ನೈರ್ಮಲ್ಯ ಪರಿಶೀಲಿಸಿ, ಅಡುಗೆ ಪದಾರ್ಥಗಳ ಗುಣಮಟ್ಟ, ರುಚಿ ನೋಡಿದರು. ನಂತರ ಊಟದ ಸಭಾಂಗಣದಲ್ಲಿ ವಿದ್ಯಾರ್ಥಿನಿಯರೊಂದಿಗೆ ಶಿಕ್ಷಣದ ಕುರಿತು ಸಂವಾದ ಮಾಡಿ, ಅವರ ಓದು, ಹಾಸ್ಟೆಲ್ ಸೌಲಭ್ಯ, ಇಲಾಖೆ ಅಧಿಕಾರಿಗಳು, ಮೇಲ್ವಿಚಾರಕರು ತೋರುವ ಕಾಳಜಿ, ಆರೋಗ್ಯ ಸುರಕ್ಷತೆ ಬಗ್ಗೆ ಮಾಹಿತಿ ಪಡೆದರು.
ವಸತಿ ನಿಲಯದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆ. ಯಾವುದೇ ಕೊರತೆಗಳಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಶಾಸಕ ಡಾ.ಶ್ರೀನಿವಾಸ್ ತಿಳಿಸಿದರು. ಬಳಿಕ ಅವರೊಂದಿಗೆ ಕುಳಿತು ಊಟ ಮಾಡಿದರು.
ಪಿಡಬ್ಲುೃಡಿ ಎಇಇ ನಾಗನಗೌಡ, ಗುಡೇಕೋಟೆ ಜಿಪಂ ಮಾಜಿ ಸದಸ್ಯ ಎಸ್.ವೆಂಕಟೇಶ್, ಮುಖಂಡರಾದ ಜಿ.ಎಂ.ಪ್ರಸನ್ನಕುಮಾರ್, ಭಟ್ರಹಳ್ಳಿ ಮಂಜುನಾಥ್, ಕೆಇಬಿ ಗೋವಿಂದಪ್ಪ, ಕಾಮತ್, ದಿನ್ನೆ ಮಲ್ಲಿಕಾರ್ಜುನ, ಶಾಸಕರ ಆಪ್ತ ಸಹಾಯಕ ಮರುಳಸಿದ್ದಪ್ಪ ಇತರರಿದ್ದರು.