ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ!

HDK Dk
Published on

ಬೆಂಗಳೂರು: ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದಾಗ ಈ ರೀತಿ ಪ್ರತಿಕ್ರಿಯಿಸಿದರು.
ಕುಮಾಸ್ವಾಮಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net