

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ!
2023ಕ್ಕೆ ವಿಧಾಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಶತಾಯಗತಾಯ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಪಣ ತೊಟ್ಟಿದ್ದು, ಆ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸುವಲ್ಲಿ ನಿರತರಾಗಿದ್ದಾರೆ. ಚುನಾವಣೆಗೆ ಇನ್ನೂ 2 ವರ್ಷ ಸಮಯ ಇದೆ. ಆಗಲೇ ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್ ಆಕಾಂಕ್ಷಿತರ ನಡುವೆ ಪೈಪೋಟಿ ಏರ್ಪಟ್ಟಿದೆ. ಇದನ್ನೂ ಓದಿರಿ ವಾಟ್ಸ್ಆ್ಯಪ್ ವಿಡಿಯೋ ಕಾಲ್ನಲ್ಲಿ ಬೆತ್ತಲಾದ ಯುವತಿಯರು… ಕಣ್ತುಂಬಿಕೊಂಡವನಿಗೆ ಕಾದಿತ್ತು ಭಾರಿ ಸಂಕಷ್ಟ!
ಜೆಪಿ ನಗರದಲ್ಲಿ ಹಮ್ಮಿಕೊಂಡಿದ್ದ ಆನೇಕಲ್ ಮತ್ತು ಬೆಂ.ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್ಡಿಕೆ, ಆನೇಕಲ್ನಿಂದ ಕೆ.ಪಿ.ರಾಜು ಹಾಗೂ ಬೆಂ.ದಕ್ಷಿಣ ಕ್ಷೇತ್ರದಿಂದ ಪ್ರಭಾಕರ್ ರೆಡ್ಡಿ ಸ್ಪರ್ಧಿಸಲಿದ್ದಾರೆ ಎಂದರು. ಮುಂಬರುವ ಚುನಾಣೆಗೆ ಈ ಎರಡೂ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್ ಪ್ರಕಟಿಸಿದ್ದು, ಇಲ್ಲಿನದ್ದೇ ರಾಜ್ಯದಲ್ಲಿ ಮೊದಲು.
ಕಳೆದ ಬಾರಿ ಬಿಎಸ್ಪಿ ಜೊತೆ ಹೊಂದಾಣಿಕೆಯಿಂದ ನಮಗೆ ತೊಂದರೆ ಆಯಿತು. ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ. ಪಕ್ಷ ಸಂಘಟನೆಗಾಗಿ ಈಗಿನಿಂದಲೇ ಅಭ್ಯರ್ಥಿ ಘೋಷಣೆ ಮಾಡಿದ್ದೇನೆ. ಮುಂದಿನ ಬಾರಿ ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದರು. ಇನ್ನು ಭ್ರಷ್ಟಾಚಾರದ ಆರೋಪ ಹೊತ್ತಿರುವ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ್ ರೆಡ್ಡಿಗೆ ಟಿಕೆಟ್ ಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.