ರೈತರ ಬಗ್ಗೆ ಸಚಿವ ಪಾಟೀಲ್ ಹೇಳಿಕೆ; ಕುಮಾರಸ್ವಾಮಿ ಖಂಡನೆ

HD Kumaraswamy (1)
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆಯನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.

ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು.

ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವ ಶಿವಾನಂದ ಪಾಟೀಲ್ ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net