ಕುಮಾರಸ್ವಾಮಿ ಸರ್ಕಾರ ಬರುವುದು ಇಲ್ಲ, ಗೆಲ್ಲುವುದೂ ಇಲ್ಲ: DK ಶಿವಕುಮಾರ್ ವ್ಯಂಗ್ಯ

dk - 2025-06-20T154519.961
Published on

ಬೆಂಗಳೂರು: ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ಡಿಸಿಎಂ DK ಶಿವಕುಮಾರ್ ಅವರು ತಿರುಗೇಟು ನೀಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದರು. ಡಿ.ಕೆ.ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. ಕುಮಾರಸ್ವಾಮಿ ಅವರು ಏನು ಹೇಳಿದ್ದರು? ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ ನಾನು ಉಡುಗೊರೆ ನೀಡುತ್ತೇನೆ ಎಂದು ಹೇಳಿದ್ದೆ ಎಂದು ವ್ಯಂಗ್ಯವಾಡಿದರು.

ಯಾರ ಅವಕಾಶವನ್ನು ನಾವು ಕಿತ್ತುಕೊಂಡಿಲ್ಲ

ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಕಡಿಮೆ ಇರುವ ಕಾರಣಕ್ಕೆ ವಸತಿ ಸಚಿವರು ಮನೆ ಹಂಚಿಕೆ ಮೀಸಲಾತಿಯನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದಾರೆ. ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ ಎಂದು ಡಿಸಿಎಂ ಸ್ಪಷ್ಟನೆ ನೀಡಿದರು.

ವಿಪಕ್ಷಗಳು ರಾಜಕೀಯ ಮಾಡುತ್ತವೆ, ಮಾಡಲಿ. ಸರ್ಕಾರ ಮನೆಗಳನ್ನು ಕಟ್ಟಿ ನಷ್ಟ ಮಾಡಿಕೊಳ್ಳಬೇಕೆ? ಪರಿಶಿಷ್ಟರಿಗೆ ಅವಕಾಶ ಮಾಡಿಕೊಡಲಾಗಿತ್ತು, ಆದರೆ ಅವರ ಕೋಟಾ ಮುಗಿದು ಹೋಯಿತು. ನಂತರ ಅದನ್ನು ಹಿಂದುಳಿದ, ಸಾಮಾನ್ಯ ವರ್ಗಗಳಿಗೆ ಬಳಸಿಕೊಂಡಿದ್ದೇವೆ. ನಮ್ಮದು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಸರ್ಕಾರ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net