

ಬೆಂಗಳೂರು: ಮೂಡಾ ಹಗರಣ ಹೊರಬರುವಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗುರುತರ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.
ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಗಮನ ಸೆಳೆದಾಗ, ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು.