

ಬೆಂಗಳೂರು: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಅವರು ಶನಿವಾರ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕಾರ್ಯಕರ್ತರು ಹಾಗೂ ಜನರ ಅಹವಾಲು ಆಲಿಸಿದರು.
ನೂರಾರು ಜನರ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿದ ಅವರು; ಬಹುತೇಕ ಮನವಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು ಹಾಗೂ ಎಲ್ಲಾ\ ಮನವಿಗಳನ್ನು ವಿಲೇವಾರಿ ಮಾಡಿದರು.
ಪ್ರಮುಖವಾಗಿ ಆರೋಗ್ಯ, ಶಿಕ್ಷಣ, ಉದ್ಯೋಗಕ್ಕೆ ಸಂಬಂಧಿಸಿ ತಮ್ಮನ್ನು ಹುಡುಕಿಕೊಂಡು ಬಂದಿದ್ದ ಜನರಿಗೆ ಸಚಿವರು ಸಹಾಯ ಹಸ್ತ ಚಾಚಿದರು.