20 ಶಾಸಕರ ಜತೆ ಹೈದರಾಬಾದ್​ಗೆ ತೆರಳಿದ ಕುಮಾರಸ್ವಾಮಿ...

HDK
Published on

ಬೆಂಗಳೂರು: ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನೂತಕ ಪಕ್ಷ ಸ್ಥಾಪನೆ ಘೋಷಣೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ 20 ಜನ ಶಾಸಕರ ತಂಡ ಹೈದ್ರಾಬಾದ್​ಗೆ ಪ್ರಯಾಣ ಬೆಳೆಸಿದೆ.

ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಭಾರತ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ನೂತನ ಪಕ್ಷ ಸ್ಥಾಪನೆ ಮಾಡಲಿದ್ದಾರೆ. ಪಕ್ಷ ಸ್ಥಾಪನೆ ಬಗ್ಗೆ ಕೆಲ ತಿಂಗಳ ಹಿಂದೆ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆ ಕೆಸಿಆರ್ ಚರ್ಚೆ ನಡೆಸಿದ್ದರು.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಕೂಡಾ ಕೆಲ ತಿಂಗಳ ಹಿಂದೆ ಹೈದ್ರಾಬಾದ್​ಗೆ ತೆರಳಿ ಕೆಸಿಆರ್​ ಜತೆಗೆ ಮಹತ್ವದ ಚರ್ಚೆ ನಡೆಸಿದ್ದರು. ಇದೀಗ ನಾಳಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹೈದ್ರಾಬಾದ್​ಗೆ ತೆರಳಿದ್ದಾರೆ. ನಾಳಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net