ಕುಮಾರಸ್ವಾಮಿ ಆರೋಗ್ಯ ಚೇತರಿಕೆ ; ಆಸ್ಪತ್ರೆಯಿಂದ ಭಾನುವಾರ ಬಿಡುಗಡೆ

HD Kumaraswamy
Published on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾತಿನಲ್ಲಿ ತೊದಲುವಿಕೆ, ಕೈನಲ್ಲಿ ದುರ್ಬಲತೆ ಕಾಣಿಸಿಕೊಂಡ ಕಾರಣ ಅವರನ್ನು ಬುಧವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಎರಡು ದಿನ ಐಸಿಯುನಲ್ಲಿ ಚಿಕಿತ್ಸೆ ನೀಡಿ ಬಳಿಕ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು.

ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಚಲುವರಾಯಸ್ವಾಮಿ, ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ್ ಸ್ವಾಮೀಜಿ ಸೇರಿದಂತೆ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಜಯನಗರ ಅಪೋಲೋ ಆಸ್ಪತ್ರೆಯ ನ್ಯೂರಾಲಜಿ ವಿಭಾಗದ ಸೀನಿಯರ್ ಕನ್ಸಲ್‌ಟೆಂಟ್ ಸತೀಶ್ ಚಂದ್ರ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net