ಕುಮುದ್ವತಿ ನದಿಯಲ್ಲಿ ಕೊಚ್ಚಿ ಹೋದ ಯುವತಿ

suicide
Published on

ರಾಣೆಬೆನ್ನೂರು: ಬಟ್ಟೆ ತೊಳೆಯಲು ಹೋಗಿದ್ದ 19 ವರ್ಷದ ಯುವತಿಯೊಬ್ಬಳು ಕುಮುದ್ವತಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ.

ತಾಲೂಕಿನ ಮಲಕನಹಳ್ಳಿಯ ಶಶಿಕಲಾ ಶಿವಪ್ಪ ಮಾಳಿಗೇರ ನೀರಿನಲ್ಲಿ ಕೊಚ್ಚಿ ಹೋದವಳು. ಇವಳು ಸೋಮವಾರ ಸಂಜೆ ಬಟ್ಟೆ ತೊಳೆಯುವ ಸಲುವಾಗಿ ನದಿ ಪಾತ್ರಕ್ಕೆ ತೆರಳಿದ್ದಳು.

ಶಶಿಕಲಾ ಬಟ್ಟೆ ತೊಳೆಯುವ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದು, ನೀರಿನ ಹರಿವು ಹೆಚ್ಚಾಗಿದ್ದರಿಂದ ಕೊಚ್ಚಿಹೋಗಿದ್ದಾಳೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಲಗೇರಿ ಠಾಣೆ ಪಿಎಸ್‌ಐ ಮಂಜುನಾಥ ಕುಪ್ಪೇಲೂರ ಭೇಟಿ ನೀಡಿ ಪರಿಶೀಲಿಸಿದರು. ಹರಿಹರದ ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಯುವತಿಗಾಗಿ ಹುಡುಕಾಟ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net