ಬಡ ಮಹಿಳೆಗೆ ಸ್ವತಃ ಶಸ್ತ್ರಚಿಕಿತ್ಸೆ ಮಾಡಿ, ಮಾನವೀಯತೆ ಮೆರೆದ ಕುಣಿಗಲ್ ಶಾಸಕ ಡಾ.ರಂಗನಾಥ್

kunigal MLA
Published on

ತುಮಕೂರು: ಕೀಲು ನೋವಿನಿಂದ ಬಳಲುತ್ತಿದ್ದ ಬಡ ಮಹಿಳೆಗೆ ಉಚಿತವಾಗಿ ತಾವೇ ಶಸ್ತ್ರಚಿಕಿತ್ಸೆ ಮಾಡಿ ಕುಣಿಗಲ್ ಶಾಸಕ ಡಾ.ರಂಗನಾಥ್ ಮಾನವೀಯತೆ ಮೆರೆದಿದ್ದಾರೆ.

ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ಆಶಾ ಎಂಬ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಡಿ ಕೀಲು ಆಪರೇಷನ್ ಮಾಡಿಕೊಂಡಿದ್ದ ಕೀಲು ಮತ್ತೇ ಡಿಸ್ ಲೊಕೆಟ್ ಆಗಿತ್ತು. ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಖಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು.

ಇದನ್ನೂ ಓದಿ: ಹೀಗಾಗುತ್ತೆ ನೋಡಿ ಸರಣಿ ಕಳ್ಳತನ ಮಾಡುತ್ತಿದ್ದವರು ಗ್ರಾಮಸ್ಥರ ಕೈಗೆ ಸಿಕ್ಕಾಗ…

ಈ ಶಸ್ತ್ರಚಿಕಿತ್ಸೆಗಾಗಿ ಆಕೆಗೆ ಸುಮಾರು 4 ರಿಂದ 5 ಲಕ್ಷ ರೂ. ಅಗತ್ಯವಿತ್ತು. ಆರ್ಥಿಕವಾಗಿ ದುರ್ಬಲಳಾಗಿದ್ದ ಮಹಿಳೆ ದಿಕ್ಕು ತೋಚದೆ ಶಾಸಕರ ಬಳಿ ಬಂದು ತನ್ನ ನೋವನ್ನು ತೋಡಿಕೊಂಡಿದ್ದಾಳೆ. ಮಹಿಳೆಯ ನೋವನ್ನು ಆಲಿಸಿದ ಶಾಸಕರು ಆಕೆಗೆ ಸಾಂತ್ವನ ಹೇಳಿ, ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಉಚಿತವಾಗಿ ಸ್ವತಃ ತಾವೇ ಆಪರೇಷನ್ ಮಾಡಿದ್ದಾರೆ. ಶಾಸಕರ ಈ ಸೇವೆಗೆ ವ್ಯಾಪಕವಾದ ಶ್ಲಾಘನೆ ವ್ಯಕ್ತವಾಗಿದ್ದು, ಶಾಸಕ ರಂಗನಾಥ್  ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿದ್ದಾರೆ.

ಶಾಸಕ ಡಾ.ರಂಗನಾಥ್, ಇದೇ ಮಾದರಿಯಲ್ಲಿ ಕೀಲು ಮೂಳೆ ಸಮಸ್ಯೆ ಇರುವ 23 ಮಹಿಳೆಯರಿಗೆ ಉಚಿತ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net