ರಾಜ್ಯಸಭಾ ಚುನಾವಣೆ: ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ

Untitled design (93)
Published on

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್​​​​​​​ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಿದ್ದು, ಗುರುವಾರ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸುತ್ತಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಇದರ ಬೆನ್ನಲ್ಲೇ ಈ ಸುದ್ದಿ ಇದೀಗ ಅಧಿಕೃತಗೊಂಡಿದ್ದು, ಎನ್​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಮಾತನಾಡಿದ್ದ ಕುಪೇಂದ್ರ ರೆಡ್ಡಿ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸುವಂತೆ ಸೂಚಿಸಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಅದರಂತೆಯೇ ಇದೀಗ ಎಚ್​ಡಿಕೆ ಹಾಗೂ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ಕುರಿತು ಎಚ್​ಡಿಕೆ ಮಾಡಿದ ಟ್ವೀಟ್ ಹೀಗಿದೆ.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯ ಜೆಡಿಎಸ್- ಬಿಜೆಪಿ ಮೈತ್ರಿಕೂಟದ (NDA) ಅಭ್ಯರ್ಥಿಯಾಗಿ ಮಾಜಿ ಸಂಸದರಾದ ಡಿ.ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿ ಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ ಮುಂತಾದವರು ಜತೆಯಲ್ಲಿದ್ದರು ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net