ಸಿದ್ದರಾಮಯ್ಯ ವಿರುದ್ಧ ಕುತಂತ್ರ ಮಾಡಿದರೆ ಪ್ರತಿಭಟನೆ

je721538035802367-abc
Published on

ರಾಣೆಬೆನ್ನೂರ: ರಾಜ್ಯ ಬಿಜೆಪಿ ಹಾಗೂ ಜೆಡಿಎಸ್​ನವರು ಸಿಎಂ ಸಿದ್ದರಾಮಯ್ಯನವರ ವಿರುದ್ಧ ವಿನಾಕಾರಣ ಆರೋಪ ಮಾಡಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಕುತಂತ್ರ ಮಾಡುತ್ತಿದ್ದಾರೆ. ಎರಡೂ ಪಕ್ಷದವರು ಸಿದ್ದರಾಮಯ್ಯನವರ ವಿರುದ್ಧದ ಕುತಂತ್ರ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಕುರುಬ ಸಮಾಜದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಾಲೂಕು ಕುರುಬ ಸಮಾಜದ ಅಧ್ಯಕ್ಷ ಷಣ್ಮುಖಪ್ಪ ಕಂಬಳಿ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಾ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಸಿಎಂ ಸಿದ್ದರಾಮಯ್ಯನವರೇ ತನಿಖೆಗೆ ಸಮಿತಿ ರಚನೆ ಮಾಡಿದ್ದಾರೆ. ಅಲ್ಲದೆ ವಾಲ್ಮೀಕಿ ಅಭಿವೃದ್ಧಿ ನಿಗದ ಅವ್ಯವಹಾರ ಕುರಿತು ತನಿಖೆಗೆ ಸೂಚಿಸಿದ್ದಾರೆ. ಇದರ ನಡುವೆಯೂ ಬಿಜೆಪಿ ಹಾಗೂ ಜೆಡಿಎಸ್​ನವರು ವಿನಾಕಾರಣ ಇಲ್ಲಸಲ್ಲದ ಆರೋಪ ಮಾಡಿ ಅಹಿಂದ ಸಿಎಂ ಆಗಿರುವ ಸಿದ್ದರಾಮಯ್ಯನವರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ.
ಕುರುಬ ಸಮಾಜದಿಂದ ಸಿದ್ದರಾಮಯ್ಯನವರು ಸಿಎಂ ಆಗಿರುವುದು ಸಮಾಜಕ್ಕೆ ಗೌರವ ದೊರೆತಂತಿದೆ. ಸಿದ್ದರಾಮಯ್ಯನವರ ವಿರುದ್ಧ ಪಿತೂರಿ ಮಾಡುವ ಉದ್ದೇಶದಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿರುವುದನ್ನು ಕೈ ಬಿಡಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಮಾಜದ ಪ್ರಮುಖರಾದ ಶಿವಪ್ಪ ಮಣೇಗಾರ, ಮೃತ್ಯುಂಜಯ ಗುದಿಗೇರ, ಸಿದ್ದಪ್ಪ ದೇವರಗುಡ್ಡ, ಬೀರಪ್ಪ ಮಳಗಿ, ಭರಮಪ್ಪ ಸರವಂದ, ರವಿರಾಜ ಹುಲಗಮ್ಮನವರ, ಆನಂದ ಹುಲಮನಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net