ಕುರುಬೂರು ಶಾಂತಕುಮಾರ್​ ಕಾರು ಅಪಘಾತ; ಸ್ಥಳೀಯ ಆಸ್ಪತ್ರೆಗೆ ದಾಖಲು

ವಿಜಯವಾಣಿ - 2025-02-14T193745.263
Published on

ಪಂಜಾಬ್​: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಪಂಜಾಬ್​​ನ ಪಟಿಯಾಲ ರಸ್ತೆಯಲ್ಲಿ ಕಾರು ಡಿವೈಡರ್​ಗೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ.

ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುವಾಗ ಮಾರ್ಗ ಮಧ್ಯೆ ಕಾರು ಚಾಲಕನ ನಿಯಂತ್ರಣ ತಪ್ಪಿ ಆಪಘಾತಕ್ಕೊಳಗಾಗಿದೆ. ಘಟನೆಯಲ್ಲಿ ತಮಿಳುನಾಡಿನ ಪಾಂಡಿಯನ್ ಮತ್ತು ಕುರುಬೂರು ಶಾಂತಕುಮಾರ್​ಗೆ ಗಾಯಗಳಾಗಿವೆ. ತಕ್ಷಣವೇ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net