

ಆಂಧ್ರಪ್ರದೇಶ: ಟಾಲಿವುಡ್ನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ಸಮಂತಾ ರುತು ಪ್ರಭು ಅಭಿನಯದ ರೋಮ್ಯಾಂಟಿಕ್-ಡ್ರಾಮಾ ಜಾನರ್ನ 'ಖುಷಿ' ಚಿತ್ರದ ಟ್ರೇಲರ್ ಡೇಟ್ ಅನ್ನು ಇದೀಗ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.
ಶಿವ ನಿರ್ವಾಣ ನಿರ್ದೇಶನದ ಖುಷಿ ಚಿತ್ರವು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸೆಪ್ಟೆಂಬರ್ 1, 2023 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆಗೊಳ್ಳಲು ಸಜ್ಜಾಗಿದೆ.
ಸದ್ಯ ಚಿತ್ರದ ಟ್ರೇಲರ್ ರಿಲೀಸ್ನ ದಿನ, ಸಮಯದ ಬಗ್ಗೆ ಮಾಹಿತಿ ಪ್ರಕಟವಾಗಿದ್ದು, 2 ನಿಮಿಷ ಮತ್ತು 41 ಸೆಕೆಂಡ್‌ಗಳ ಟ್ರೇಲರ್, ಆಗಸ್ಟ್ 9, 2023 ರಂದು ಸಿನಿಪ್ರೇಕ್ಷಕರ ಮುಂದೆ ಹಾಜರಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಚಿತ್ರ ತಯಾರಕರು ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಿದ್ದಾರೆ.
ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದಲ್ಲಿ ತಯಾರಾಗಿರುವ ಚಿತ್ರದಲ್ಲಿ ವಿಜಯ್ ದೇವರಕೊಂಡ, ಸಮಂತಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಜಯರಾಮ್, ಸಚಿನ್ ಖೇಡಕರ್, ಮುರಳಿ ಶರ್ಮಾ, ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲ ಕಿಶೋರ್, ರಾಹುಲ್ ರಾಮಕೃಷ್ಣ, ಶ್ರೀಕಾಂತ್ ಅಯ್ಯಂಗಾರ್ ಮತ್ತು ಶರಣ್ಯ ಪ್ರದೀಪ್ ಸೇರಿದಂತೆ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ,(ಏಜೆನ್ಸೀಸ್).