ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ

Kusuma
Published on

ಬೆಂಗಳೂರು: ಆರ್​.ಆರ್.ನಗರ ಉಪಚುನಾವಣೆ ನಾಳೆಯೇ ಇದೆ. ಬಹಿರಂಗ ಪ್ರಚಾರಕ್ಕೆ ನಿನ್ನೆ ತೆರೆಬಿದ್ದಿದ್ದು, ಇಂದು ಮೂರೂ ಪಕ್ಷಗಳ ಅಭ್ಯರ್ಥಿಗಳು ಮನೆಮನೆ ಪ್ರಚಾರ ಮಾಡಲಿದ್ದಾರೆ.

ಈ ಮಧ್ಯೆ ಇಂದು ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ತೆರಳಿ ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಈ ವೇಳೆ ಕುಸುಮಾ ಅವರ ತಂದೆ ಹನುಮಂತರಾಯಪ್ಪ ಮತ್ತು ತಾಯಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net