

ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ೋಷಣೆಯಾಗಿದೆ.
ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕ ಮತ್ತು ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ.
ಅ.13ಕ್ಕೆ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅಂದೇ ಎಲ್ಲೆಡೆ ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ. ಅ.19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ.30 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ. ನ.9ಕ್ಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.