ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಲಿ; ಪ್ರಕಾಶ ಕೋಳಿವಾಡ

1-RNR-06
Published on

ರಾಣೆಬೆನ್ನೂರ: ಕಾರ್ಮಿಕರು ಶ್ರಮಜೀವಿಗಳು ಅವರ ಮಕ್ಕಳು ಅವರಂತೆ ಶ್ರಮಜೀವಿಗಳಾಗದೆ ಉನ್ನತ ಶಿಕ್ಷಣ ಪಡೆದು ದೊಡ್ಡ ಹುದ್ದೆಯನ್ನು ಪಡೆಯಲಿ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ನಗರದ ಮೌನೇಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಮಿಕ ಇಲಾಖೆಯಿಂದ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸೋಮವಾರ ಏರ್ಪಡಿಸಿದ್ದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಿಸಿ ಅವರು ಮಾತನಾಡಿದರು.
ಕಾರ್ಮಿಕರ ಮಕ್ಕಳಲ್ಲಿ ಹುದುಗಿರುವ ಕೌಶಲತೆಯನ್ನು ಹೊರತೆಗೆಯಬೇಕು. ಸರ್ಕಾರದಿಂದ ಅಂತಹ ಮಕ್ಕಳಿಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದರು.
ಕಾರ್ಮಿಕ ಕಲ್ಯಾಣ ಇಲಾಖೆಯಿಂದ ಉಚಿತ ಆಂಬ್ಯುಲೆನ್ಸ್ ವಾಹನಕ್ಕೆ ಚಾಲನೆ ನೀಡಿದರು.
ರೈತ ಮುಖಂಡ ರವೀಂದ್ರಗೌಡ ಪಾಟೀಲ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ, ಅಕ್ರಮಭಾಷಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net