ಬೆಂಗಳೂರು:
ವಿದೇಶದಂತೆ ರಾಜ್ಯದಲ್ಲೂ ಸರ್ಕಾರಿ ಮತ್ತು ಖಾಸಗಿ ಉದ್ಯೋಗಸ್ಥ ಮಹಿಳೆಯರಿಗೆ ಋತುಸ್ರಾವ ರಜೆ ಜಾರಿ ಕುರಿತು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.
ಇನ್ನು ಇದಕ್ಕೆ ಸಂಬಂದಿಸಿದ ಇಲಾಖೆಯ ಜೊತೆಗೆ ಚರ್ಚೆ ಮಾಡಿ ನಂತರ ತೀರ್ಮಾನ ತೆಗೆದುಕೊಳ್ಳಬೇಕು. ನಮ್ಮ ಇಲಾಖೆ ಒಂದೇ ನಿರ್ಧಾರ ತೆಗೆದುಕೊಳ್ಳಲು ಬರಲ್ಲ ಎಂದು ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಋತುಸ್ರಾವದ ರಜೆ ನೀತಿ-2024ನ್ನು ಜಾರಿಗೊಳಿಸುವ ಸಂಬಂಧ ನಡೆದ ಸಭೆಯಲ್ಲಿ ಮಹಿಳಾ ಸಂಘಟನೆ,ಮಹಿಳಾ ವೈದ್ಯರು ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು ಎಂದರು.
ಎಲ್ಲಾ ಇಲಾಖೆಗಳ ಅಭಿಪ್ರಾಯ ಬರಬೇಕು. ಆನಂತರ ಆರ್ಥಿಕ ಇಲಾಖೆಯ ಮಂಜೂರಾತಿ ಸಿಗಬೇಕು. ಆನಂತರ ಇದನ್ನ ಸರ್ಕಾರದ ಮುಂದೆ ತರಲಾಗುವುದು ಎಂದು ಹೇಳಿದರು.
ಈ ಬಗ್ಗೆ ಎಲ್ಲಾ ಇಂಡಸ್ಟ್ರಿಯವರ ಅಭಿಪ್ರಾಯ ಪಡೆಯುತ್ತೇವೆ. ಈ ಬಗ್ಗೆ ಇನ್ನೂ ಸಾಕಷ್ಟು ಚರ್ಚೆ ಆಗಬೇಕಾಗಿದೆ ಎಂದರು.
ಸಭೆಯಲ್ಲಿ ಡಾ.ಪುಷ್ಪಲತಾ, ಜಯಮ್ಮ, ಡಾ.ಸುಪ್ರಿಯ, ಮನೋರಮಾ, ಅನುರಾಗ್ ಸಿಂಗ್ಲಾ ಮತ್ತು ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.