ಜನ್ಮ ದಿನದ ಪ್ರಯುಕ್ತ ಕೆರೆ ದತ್ತು ಪಡೆದ ಸಚಿವ ಕೆ.ಎಸ್.ಈಶ್ವರಪ್ಪ

IMG_3425
Published on

ಶಿವಮೊಗ್ಗ: ಕೆರೆಗಳನ್ನು ಕಬಳಿಸಿ ಕಾಂಪ್ಲೆಕ್ಸ್ ನಿರ್ಮಿಸುವ ರಾಜಕಾರಣಿಗಳಿದ್ದಾರೆ. ಇದರ ನಡುವೆ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಜನ್ಮ ದಿನದ ಪ್ರಯುಕ್ತ ಕೆರೆ ಅಭಿವೃದ್ಧಿಗೆ ಪಣ ತೊಟ್ಟಿರುವುದು ಮಾದರಿ ಕಾರ್ಯ ಎಂದು ಕಾಗಿನೆಲೆ ಕನಕಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಪರಿಸರಾಸಕ್ತರ ತಂಡದಿಂದ ಗುರುವಾರ ಸಚಿವ ಕೆ.ಎಸ್.ಈಶ್ವರಪ್ಪ ಜನ್ಮ ದಿನದ ಅಂಗವಾಗಿ ನಗರದ ಹೊರವಲಯದ ಮಲ್ಲಿಗೇನಹಳ್ಳಿ ರಾಮಿನಕಟ್ಟೆ ಕೆರೆ ಪುನಶ್ಚೇತನ ಚಾಲನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಎಲ್ಲ ಜನಪ್ರತಿನಿಧಿಗಳು ವಿಶೇಷ ಸಂದರ್ಭದಲ್ಲಿ ಕೆರೆಗಳನ್ನು ದತ್ತು ಸ್ವೀಕರಿಸಿ ಅಭಿವೃದ್ಧಿಪಡಿಸಬೇಕೆಂದರು. ಕರೊನಾ ಸಂಕಷ್ಟದ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪ, ಹಲವು ಕುಟುಂಬಗಳಿಗೆ ನೆರವು ನೀಡುತ್ತಿದ್ದಾರೆ. ಪರಿಸರದ ಬಗ್ಗೆ ಕಾಳಜಿ ತೋರಿದ್ದಾರೆ. ಕರೊನಾ ಸೋಂಕಿತರಿಗೆ ಆರೈಕೆ ಕೇಂದ್ರ ಆರಂಭಿಸಿದ್ದಾರೆ. ಇದೆಲ್ಲವೂ ಮಾದರಿ ಕಾರ್ಯವಾಗಿದೆ ಎಂದರು.

ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಬೆಕ್ಕಿನ ಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಸಚಿವ ಕೆ.ಎಸ್.ಈಶ್ವರಪ್ಪ, ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್ ಮುಂತಾದವರಿದ್ದರು.

ಎಂಎಲ್‌ಸಿ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net