

ಬೆಂಗಳೂರು ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸೆ.3ರಂದು ರಾಜ್ಯದ 35 ಶೈಕ್ಷಣಿಕ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದ್ದು, ಎರಡು ಪತ್ರಿಕೆಗಳಿಂದ 3.33 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಪತ್ರಿಕೆ -1(1-5ನೇ ತರಗತಿ) 1,43,705 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 544 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದೇ ರೀತಿ ಪತ್ರಿಕೆ-2(6-8ನೇ ತರಗತಿ) 1,89,994 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 711 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪತ್ರಿಕೆ-1 ಬೆಳಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಪತ್ರಿಕೆ-2 ಮಧ್ಯಾಹ್ನ 2 ಗಂಟೆ 4.30ರ ವರೆಗೆ ನಡೆಯಲಿದೆ.
ಭಾಷಾ ವಿಷಯಗಳ ಹೊರತಾಗಿ ಉಳಿದ ಎಲ್ಲ ವಿಷಯಗಳ ಪರೀಕ್ಷೆಗಳು ಕನ್ನಡ, ಇಂಗ್ಲಿಷ್, ಉರ್ದು, ತಮಿಳು, ತೆಲುಗು, ಹಿಂದಿ ಮತ್ತು ಮರಾಠಿ ಮಾಧ್ಯಮಗಳಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.