ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು​​​ ಅಪಘಾತ : ಚಾಲಕನ ನಿಯಂತ್ರಣ ತಪ್ಪಿ ಕಾರ್​ ಮರಕ್ಕೆ ಡಿಕ್ಕಿ...Lakshmi Hebbalkar Car Accident

Lakshmi Hebbalkar Car Accident
Published on
ಬೆಳಗಾವಿ:  ( Lakshmi Hebbalkar Car Accident )ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಕಾಂಗ್ರೆಸ್​ ಶಾಸಕಾಂಗ ಸಭೆ ಮುಗಿಸಿ ಬರುವಾಗ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಂಎಲ್​ಸಿ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ.

ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರ್​ ಮರಕ್ಕೆ ಡಿಕ್ಕಿ ಹೊಡೆದಿದೆ.  ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮತ್ತು ಮುಖಕ್ಕೆ ಸಣ್ಣಪುಟ್ಟ ಗಾಯಗಳು ಆಗಿವೆ. ಎಂಎಲ್​ಸಿ ಚೆನ್ನರಾಜ ಹಟ್ಟಿಹೊಳಿ ಅವರಿಗೂ ತಲೆಗೆ ಗಾಯ ಆಗಿದೆ.

ಸದ್ಯ ಇಬ್ಬರನ್ನು ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net