

ಬೆಳಗಾವಿ: ( Lakshmi Hebbalkar suffers spinal fracture in car accident) ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕಿಡಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿಸಿ ಬರುವಾಗ ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮತ್ತು ಮುಖಕ್ಕೆ ಸಣ್ಣಪುಟ್ಟ ಗಾಯಗಳು ಆಗಿವೆ. ಸದ್ಯ ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರ, ಗನ್‌ಮ್ಯಾನ್, ಡ್ರೈವರ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹೆಬ್ಬಾಳ್ಕರ್ ಅವರ ಆರೋಗ್ಯ ಚೇತರಿಕೆ ಆಗ್ತಿದೆ ಎನ್ನಲಾಗಿದೆ.
ವೈದ್ಯರು ಹೇಳಿದ್ದೇನು?: ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿಗೆ ಬಲವಾದ ಪೆಟ್ಟಾಗಿದೆ. ಇವರ ಬೆನ್ನಿನ ಎಲ್1 ಮತ್ತು ಎಲ್4 ಫ್ರಾಕ್ಚರ್ ಆಗಿರುವುದು ಧೃಡವಾಗಿದೆ. ಪೇನ್ ಕಿಲ್ಲರ್ ಕೊಟ್ಟ ಟ್ರೀಟ್ಮೆಂಟ್ ಮುಂದುವರಿಸಿದ್ದೇವೆ. ಈಗ ಸುಧಾರಿಸಿದ್ದು, ಇನ್ನೂ 2 ದಿನ ಚಿಕಿತ್ಸೆ ನೀಡಿ ಡಿಶ್ಚಾರ್ಜ್ ಮಾಡುತ್ತೇವೆ. ಹೆಬ್ಬಾಳ್ಕರ್ ಅವರು ಕನಿಷ್ಠ 1 ತಿಂಗಳು ಬೆಡ್ ರೆಸ್ಟ್ ಮಾಡಬೇಕು ಎಂದರು ಡಾ. ರವಿ ಪಾಟೀಲರು ಖಾಸಗಿವಾಹಿನಿಗೆ ತಿಳಿಸಿದ್ದಾರೆ.