ಭೂಸ್ವಾಧೀನ ಕೈ ಬಿಡುವಂತೆ ಆಗ್ರಹ; ಸಿಎಂ ನೇತೃತ್ವದಲ್ಲಿ ಹೋರಾಟಗಾರರ ಸಭೆ

MUDA SCAM
Published on

ಬೆಂಗಳೂರು:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧ ಹೋರಾಟ ಸಮಿತಿಯ ಪದಾಧಿಕಾರಿಗಳು ಮತ್ತು ರೈತ ಮುಖಂಡರುಗಳ ಜೊತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ತಮ್ಮ ಬೇಡಿಕೆಯನ್ನು ಮುಂದಿಟ್ಟ ಹೋರಾಟಗಾರರು, ನಾನಾ ಕಾರಣಗಳನ್ನು ಮುಂದಿಟ್ಟು ನಮ್ಮ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ನಮ್ಮ ಬದುಕಾಗಿರುವ ಈ ಭೂಮಿಯನ್ನು ಬಿಟ್ಟುಕೊಡಬೇಕು ಎಂದು ಮನವಿ ಮಾಡಿದರು.
ರೈತರ ಬೇಡಿಕೆಗಳನ್ನು ಸಮಾಧಾನದಿಂದ ಪರಿಶೀಲಿಸಲಾಗುವುದು. ಈ ಬಗ್ಗೆ ಸಭೆಯನ್ನು ನಡೆಸಿ , ಅಭಿಪ್ರಾಯ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಇಲಾಖೆಯಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net