ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆ, ಕಾಡುಮನೆ ಅರಣ್ಯದಲ್ಲಿ ಭೂಕುಸಿತ

dakshin kannada
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಾಡುಮನೆ ಅರಣ್ಯ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ.

ಕಾಡುಮನೆ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಪರಿಣಾಮ, ಗ್ರಾಮದ ಜನರು ಪರಿಶೀಲನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಭೂಕುಸಿತ ಉಂಟಾಗಿರುವುದು ಗೊತ್ತಾಯಿತು ಎನ್ನಲಾಗಿದೆ.

ಅರಣ್ಯ ಭಾಗದ ಕೆಳ ಪ್ರದೇಶದಲ್ಲಿ 30ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಹೀಗಾಗಿ, ಕಾಡುಮನೆ ಅರಣ್ಯ ಪ್ರದೇಶ ವ್ಯಾಪ್ತಿಯ ಎಲ್ಲ 30 ಕುಟುಂಬಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net