ಭರವಸೆ ಈಡೇರಿಕೆಗೆ ಪಕ್ಷ ಬದ್ಧ

27 TNP bose
Published on

ತಿ.ನರಸೀಪುರ : ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಮುಖಂಡ ಸುನಿಲ್ ಬೋಸ್ ಹೇಳಿದರು. ತಾಲೂಕಿನ ಉಕ್ಕಲಗೆರೆ ಗ್ರಾ.ಪಂ. ವ್ಯಾಪ್ತಿಯ ಚಿಕ್ಕಲಕ್ಷ್ಮೀಪುರ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕೆ ಕಳೆದ ಚುನಾವಣೆಯಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ. ನುಡಿದಂತೆ ನಡೆಯುತ್ತಿರುವ ಸರ್ಕಾರ ಜನರಿಗೆ ಕೊಟ್ಟ ಭರವಸೆ ಈಡೇರಿಸುತ್ತಿದೆ. ಪದವೀಧರ ಯುವಕರಿಗೆ ಪ್ರೋತ್ಸಾಹ ಧನ ನೀಡುವ ಯುವ ನಿಧಿ ಗ್ಯಾರಂಟಿ ಯೋಜನೆ ಜನವರಿ 12 ರಂದು ಚಾಲನೆ ಗೊಳ್ಳಲಿದೆ ಎಂದರು. ಕಾಂಗ್ರೆಸ್ ಮುಖಂಡ ಉಕ್ಕಲಗೆರೆ ಬಸವಣ್ಣ ಮಾತನಾಡಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾದಾಗ ಮಾತ್ರ ಅಭಿವೃದ್ಧಿ ಕೆಲಸಗಳು ಆಗುತ್ತಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net