

ನವದೆಹಲಿ: ಕೇದಾರನಾಥ ಯಾತ್ರೆ ಮಾರ್ಗದ ಗೌರಿಕುಂಡ್ ಬಳಿ ಕಳೆದ ರಾತ್ರಿ ಭೂಕುಸಿತ ಉಂಟಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಈ ಕಾರಣಕ್ಕೆ ಕೇದಾರನಾಥ ಯಾತ್ರೆಯನ್ನು ಇದೀಗ ಸ್ಥಗಿತಗೊಳಿಸಲಾಗಿದೆ.
ಮಧ್ಯರಾತ್ರಿಯ ಸುಮಾರಿಗೆ ಗೌರಿಕುಂಡ್ ಪ್ರದೇಶದಲ್ಲಿ ಸುರಿದ ಭಾರಿ ಮಳೆಗೆ ಮೂರು ಅಂಗಡಿಗಳು ಭೂಕುಸಿತಕ್ಕೆ ನೆಲಸಮಗೊಂಡಿದೆ. ಅಂಗಡಿಗಳು ಮತ್ತು ಹೋಟೆಲ್‌ಗಳ ಅವಶೇಷಗಳು ಮಂದಾಕಿನಿ ನದಿಯಲ್ಲಿ ಕುಸಿದಿರುವುದು ಕಂಡುಬಂದಿದ್ದು, ಕೆಲವರು ಪ್ರವಾಹದಲ್ಲಿ ಕೊಚ್ಚಿಹೋಗಿರಬಹುದು ಅಥವಾ ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ರುದ್ರಪ್ರಯಾಗ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಗಹರ್ವಾರ್, ನಾಪತ್ತೆಯಾದವರಿಗಾಗಿ ಶೋಧ ನಡೆಸುತ್ತಿರುವಾಗ ನಾಲ್ಕು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಘಟನೆಯ ಬೆನ್ನಲ್ಲೇ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ರಾಜ್ಯ ಸಚಿವಾಲಯದ ವಿಪತ್ತು ನಿಯಂತ್ರಣ ಕೊಠಡಿಗೆ ಭೇಟಿ ನೀಡಿ, ರಕ್ಷಣಾ ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ,(ಏಜೆನ್ಸೀಸ್).