ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಮೊತ್ತದ ಬಜೆಟ್!

bommai
Published on

ಬೆಂಗಳೂರು: 2023-24 ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಆರ್ ಟಿ ನಗರದ ಮುತ್ತಪ್ಪ ಬ್ಲಾಕ್ ನ ಶ್ರೀ ಕಂಠೇಶ್ವರ ದೇವಸ್ಥಾನ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯದ ಜನತೆಗೆ ಒಳಿತಾಗಲೆಂದು ರಾಜ್ಯದ ಮಹಾಜನತೆ ಹೆಸರಿನಲ್ಲಿ ಪೂಜೆ ಸಲ್ಲಿಸಿರುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಬಿಜೆಪಿ ಆಡಳಿತಾವಧಿಯ ಕೊನೆಯ ಹಾಗೂ ಬಸವರಾಜ ಬೊಮ್ಮಾಯಿ‌ಯವರ ಎರಡನೇ ಮುಂಗಡಪತ್ರ ಇದಾಗಿದೆ.

ಈ ಬಾರಿಯ ರಾಜ್ಯ ಬಜೆಟ್ ಬರೋಬ್ಬರಿ 3 ಲಕ್ಷ 9 ಸಾವಿರ 182 ಆಗಿರಲಿದೆ. ಇಷ್ಟು ದೊಡ್ಡ ಮೊತ್ತದ ಬಜೆಟ್​ ಇದೇ ಮೊದಲ ಬಾರಿಗೆ ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net