ರೈಲು ನಿಲ್ದಾಣದಲ್ಲಿ ಲಷ್ಕರ್‌-ಎ-ತೊಯ್ಬಾ ಭಯೋತ್ಪಾದಕ ಬಂಧನ; ಮಹತ್ವದ ಮಾಹಿತಿ ಬಹಿರಂಗಪಡಿಸಿದ ಪೊಲೀಸರು

terrorist
Published on

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಗಡಿಯಾಚೆಯಿಂದ ಬರುವ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸರಬರಾಜಿನಲ್ಲಿ ಇವನು ದೊಡ್ಡ ಪಾತ್ರ ವಹಿಸಿದ್ದನು ಎನ್ನಲಾಗಿದೆ. ಈತನಿಂದ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಕೂಡ ವಶಪಡಿಸಿಕೊಳ್ಳಲಾಗಿದೆ. 

ಮದ್ದುಗುಂಡು ಸರಬರಾಜು ಮಾಡುತ್ತಿದ್ದ ಉಗ್ರ 
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ದೆಹಲಿ ಪೊಲೀಸರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನನ್ನು ಬಂಧಿಸಿದ್ದು, ಈ ಉಗ್ರನನ್ನು ರಿಯಾಜ್ ಅಹ್ಮದ್ ಎಂದು ಗುರುತಿಸಲಾಗಿದೆ. ನವದೆಹಲಿ ರೈಲು ನಿಲ್ದಾಣದ ಬಳಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಈ ಮೊದಲೇ ಹೇಳಿದ ಹಾಗೆ ಆರೋಪಿ ರಿಯಾಜ್ ಅಹ್ಮದ್ ಎಲ್‌ಒಸಿಯಿಂದ ಬಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಸರಬರಾಜು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ಉಗ್ರನಿಂದ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಸಹ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ರಿಯಾಜ್ ಅಹಮದ್ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ದೆಹಲಿ ಪೊಲೀಸರು ಜಮ್ಮು ಮತ್ತು ಕಾಶ್ಮೀರದ ಸಂಬಂಧಪಟ್ಟ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net