ಕೋವಿಡ್ಗೆ 25 ದಿನಗಳಲ್ಲಿ 25 ಮಂದಿ ಸಾವು

Covid
Published on

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗುತ್ತಿದ್ದು, ಕಳೆದ 25 ದಿನಗಳಲ್ಲಿ (ಡಿ.15ರಿಂದ ಜ.9ರವರೆಗೆ) 25 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಮತ್ತು ಮೈಸೂರಿನಲ್ಲಿ ತಲಾ 8 ಮಂದಿ, ದಕ್ಷಿಣ ಕನ್ನಡದಲ್ಲಿ ಮೂವರು, ಹಾಸನ, ವಿಜಯನಗರ, ಕೊಪ್ಪಳ, ಧಾರವಾಡ, ಗದಗ ಮತ್ತು ಬಳ್ಳಾರಿಯಲ್ಲಿ ತಲಾ ಒಬ್ಬರಂತೆ 25 ಮಂದಿ ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೋವಿಡ್ ಬಗ್ಗೆ ಆತಂಕ ಬೇಡ ಎಚ್ಚರಿಕೆ ಇರಲಿ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ 7,359 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 172, ಹಾಸನದಲ್ಲಿ 20 ಸೇರಿ ರಾಜ್ಯಾದ್ಯಂತ 252 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,031 ತಲುಪಿದೆ. ಚಿಕಿತ್ಸೆ ಲಿಸದೆ ಮೈಸೂರಿನ 56 ವರ್ಷದ ವ್ಯಕ್ತಿ ಹಾಗೂ ಬಳ್ಳಾರಿಯ 50 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ 1,031 ಸಕ್ರಿಯ ಪ್ರಕರಣಗಳಿದ್ದು, 962 ಮಂದಿ ಮನೆ ಆರೈಕೆಯಲ್ಲಿದ್ದಾರೆ. 69 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 50 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ, 18 ಮಂದಿ ತುರ್ತು ನಿಗಾ ಘಟಕದಲ್ಲಿ ಹಾಗೂ ಒಬ್ಬರು ಐಸಿಯುನಲ್ಲಿ ವೆಂಟಿಲೇಟರ್ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net