

ಬೆಂಗಳೂರು: ಮುಂದಿನ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಪುನರಾವರ್ತಿತ, ಲಿತಾಂಶ ಉತ್ತಮಪಡಿಸಿಕೊಳ್ಳುವ ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡುವ ಅವಧಿಯನ್ನು ಡಿ.31ರವರೆಗೆ ವಿಸ್ತರಿಸಲಾಗಿದೆ.
ದಂಡ ಶುಲ್ಕ 1200 ರೂ. ಪಾವತಿಸಿ ನೋಂದಣಿ ಮಾಡಿಕೊಳ್ಳಲು ಡಿ.12ರವರೆಗೆ ವಿಸ್ತರಿಸಲಾಗಿತ್ತು. ಈಗ ದಂಡ ಶುಲ್ಕ 1200 ರೂ. ಹಾಗೂ ವಿಶೇಷ ದಂಡ ಶುಲ್ಕ 1,320 ರೂ.ಗಳನ್ನು ಪಾವತಿಸಿ ನೋಂದಣಿ ಮಾಡಿಕೊಳ್ಳಲು ಡಿ.31 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.
ಪಾಲಕರು ಮತ್ತು ವಿದ್ಯಾರ್ಥಿಗಳ ಮನವಿ ಮೇರೆಗೆ ಅವಧಿ ವಿಸ್ತರಿಸಲಾಗಿದೆ. ಮತ್ತೊಮ್ಮೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.