ಜಾನುವಾರುಗಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ

21BTP02
ಚಪ್ಪರದಹಳ್ಳಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ವತಿಯಿಂದ ನಡೆದ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಅಭಿಯಾನಕ್ಕೆ ಡಾ.ಹರ್ಷಿತಾ ಚಾಲನೆ ನೀಡಿದರು.
Published on

ಬೆಟ್ಟದಪುರ: ಚಪ್ಪರದಹಳ್ಳಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ವತಿಯಿಂದ ಸೋಮವಾರ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕುವ ಅಭಿಯಾನಕ್ಕೆ ಪಶು ವೈದ್ಯಾಧಿಕಾರಿ ಡಾ.ಹರ್ಷಿತಾ ಚಾಲನೆ ನೀಡಿದರು.
ಕೇಂದ್ರ ಸರ್ಕಾರದ ರಾಷ್ಟ್ರೀಯ ಜಾನುವಾರು ಕಾಯಿಲೆ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಅ.21 ರಿಂದ ನವೆಂಬರ್ 20ರವರೆಗೆ ನಡೆಯಲಿದೆ. ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ. ಎಲ್ಲ ರೈತರು ತಮ್ಮ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕರಾದ ಚೇತನ್, ಮೊಹಮ್ಮದ್ ಸಮಿವುಲ್ಲಾ, ಪಶುಸಖಿಯರಾದ ರಮ್ಯಾ, ಮೀನಾಕ್ಷಿ, ಸವಿತಾ, ಸಿಬ್ಬಂದಿ ಶಿವರಾಜ್, ಮೂರ್ತಿ, ಜಗದೀಶ್, ಸುದೀಪ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net